BBMP Recruitment 2021 : 420 ವಿವಿಧ ಹದ್ದೆಗಳಿಗೆ ನೇರ ಸಂದರ್ಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 420 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 13,2021 ರಿಂದ ಸೆಪ್ಟೆಂಬರ್ 22,2021ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬಿಬಿಎಂಪಿ ಯಲ್ಲಿ 420 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಸ್‌ಎಸ್ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಎಂ.ಡಿ, ಡಿಎನ್‌ಬಿ, ಡಿಎಂಆರ್‌ಡಿ, ಬಿ.ಎಸ್ಸಿ, ಜಿಎನ್‌ಎಂ, ಬಿ.ಫಾರ್ಮಾ, ಡಿ.ಫಾರ್ಮಾ, ಡಿಪ್ಲೋಮಾ ಇನ್ ಲ್ಯಾಬ್ ಟೆಕ್ನಾಲಜಿ, ಎಎನ್‌ಎಂ ಟ್ರೈನಿಂಗ್, ಎಂಎಸ್‌ಡಬ್ಲ್ಯೂ, ಡಿಸಿಹೆಚ್, ಎಂಬಿಬಿಎಸ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,225/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಹುದ್ದೆಗಳಿಗನುಸಾರ ಸೆಪ್ಟೆಂಬರ್ 13,2021 ರಿಂದ ಸೆಪ್ಟೆಂಬರ್ 22,2021ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ನೌಕರರ ಭವನ,
ಬಿಬಿಎಂಪಿ ಮುಖ್ಯ ಕಚೇರಿ,
ಬೆಂಗಳೂರು,
ಕರ್ನಾಟಕ.

ಅಭ್ಯರ್ಥಿಗಳು ಬಿಬಿಎಂಪಿ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬಿಬಿಎಂಪಿ ಯಲ್ಲಿ 420 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
BBMP recruitment 2021 notification has been released for 420 ANM, male health worker and various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+