ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 63 ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 10,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
BBMP ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಎಂಬಿಬಿಎಸ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಮತ್ತು ಕೆ.ಎಂ.ಸಿ ಕೌನ್ಸಿಲ್ ನೊಂದಾವಣಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
BBMP ನೇಮಕಾತಿ 2022 ವಯೋಮಿತಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
BBMP ನೇಮಕಾತಿ 2022 ವೇತನದ ವಿವರ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 47,250/- ರೂ ವೇತನವನ್ನು ನೀಡಲಾಗುವುದು.
BBMP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
BBMP ನೇಮಕಾತಿ 2022 ಅರ್ಜಿ ಶುಲ್ಕ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
BBMP ನೇಮಕಾತಿ 2022 ಸಂದರ್ಶನ ವಿವರ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್ http://bbmp.gov.in/ ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 10,2022ರಂದು ಬೆಳಿಗ್ಗೆ 10:30 ರಿಂದ ಸಂಜೆ 4:30ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ :
ನೌಕರರ ಭವನ ಸಭಾಂಗಣ,
ಬಿ.ಬಿ.ಎಂ.ಪಿ ಕೇಂದ್ರ ಕಚೇರಿ,
ಎನ್.ಆರ್.ಚೌಕ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











