ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ 6 ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 8,2022 ರಿಂದ ಫೆಬ್ರವರಿ 25,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

BDA ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆಯಿಲ್ಲದ ನಿವೃತ್ತ ಅಧಿಕಾರಿಗಳು ಅರ್ಜಿಯನ್ನು ಹಾಕಬಹುದು.
BDA ನೇಮಕಾತಿ 2022 ವಯೋಮಿತಿ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
BDA ನೇಮಕಾತಿ 2022 ವೇತನದ ವಿವರ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,00,000/-ರೂ ವೇತನ ಜೊತೆಗೆ ಕಛೇರಿಯ ಕೆಲಸಕ್ಕಾಗಿ ಸಹಾಯಕ ಸಿಬ್ಬಂದಿಗಳು, ಕಾರು ಮತ್ತು ಚಾಲಕರನ್ನು ಒದಗಿಸಲಾಗುವುದು.
BDA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
BDA ನೇಮಕಾತಿ 2022 ಅರ್ಜಿ ಶುಲ್ಕ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
BDA ನೇಮಕಾತಿ 2022 ಅರ್ಜಿ ಸಲ್ಲಿಕೆ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 8,2022 ರಿಂದ ಫೆಬ್ರವರಿ 25,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











