ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 1500 ಸ್ಕಿಲ್ಡ್ ಮತ್ತು ಅನ್‌ಸ್ಕಿಲ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
8ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಬಿಇಸಿಐಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಸ್ಕಿಲ್ಡ್ ಮತ್ತು ಅನ್‌ಸ್ಕಿಲ್ಡ್ ಮ್ಯಾನ್ ಪವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತರು ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.