BECIL Recruitment 2020: ಸಮಾಲೋಚಕ ಹುದ್ದೆಗಳಿಗೆ ಅರ್ಜಿ ಆಹ್ವಾನ..ಡಿ,7ರೊಳಗೆ ಅರ್ಜಿ ಹಾಕಿ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 7 ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

 
ಬಿಇಸಿಐಎಲ್ ನಲ್ಲಿ ಉದ್ಯೋಗಾವಕಾಶ: ಡಿ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ, ಸ್ನಾತಕೋತ್ತರ ಪದವಿ, ಬಿ.ಇ, ಎಂ,ಡಿ, ಎಂಬಿಎ, ಸಿಎ/ಐಸಿಡಬ್ಲ್ಯೂಎ, ಡಿಪ್ಲೋಮಾ ಮತ್ತು ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 50 ಮತ್ತು 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,00,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಮಹಿಳಾ ಅಭ್ಯರ್ಥಿಗಳು 750/-ರೂ ಮತ್ತು ಪ.ಜಾ/ಪ.ಪಂ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BECIL recruitment 2020 notification has been released for 7 consultant posts. Interested candidates can apply through online before December 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X