BECIL Recruitment 2020 : 749 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 749 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ಬಿಇಸಿಐಎಲ್ ನಲ್ಲಿ 749 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

12ನೇ ತರಗತಿ, ಐಟಿಐ, ಪದವಿ, 10ನೇ ತರಗತಿ/ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ, ಎಂಎ, ಎಂಸಿಎ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 44,900/-ರೂ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 830/-ರೂ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BECIL recruitment 2020 notification has been released for 749 non faculty posts. Interested candidates can apply through online before December 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X