BECIL Recruitment 2021 : 10 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ 10 ಹಿರಿಯ ಸಲಹೆಗಾರ, ಕಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಆಗಸ್ಟ್ 13, 2021 ರಿಂದ ಸೆಪ್ಟೆಂಬರ್ 2, 2021ರ ವರೆಗೆ ನಡೆಯಲಿದೆ.

ಬಿಇಸಿಐಎಲ್ ನಲ್ಲಿ 10 ಸಲಹೆಗಾರ ಹುದ್ದೆಗಳ ನೇಮಕಾತಿ

ಬಿಇಸಿಐಎಲ್ ನೇಮಕಾತಿ 2021 ಅರ್ಹತೆಗಳು :

ಬಿಇಸಿಐಎಲ್ ನೇಮಕಾತಿ 2021ರ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇಸಿಐಎಲ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿಜ್ಞಾನ/ಇಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಹೊಂದಿರಬೇಕು; ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಥವಾ ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ; ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಬಿಇಸಿಐಎಲ್ ನೇಮಕಾತಿ 2021 ವಯೋಮಿತಿ :

ಬಿಇಸಿಐಎಲ್ ನೇಮಕಾತಿ 2021ರ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಬಿಇಸಿಐಎಲ್ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು. ಮೀಸಲಾತಿ ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬಿಇಸಿಐಎಲ್ ನೇಮಕಾತಿ 2021 ವೇತನ :

ಬಿಇಸಿಐಎಲ್ ನೇಮಕಾತಿ 2021ರ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಬಿಇಸಿಐಎಲ್ ನೇಮಕಾತಿ 2021 ಅರ್ಜಿ ಶುಲ್ಕ:

ಬಿಇಸಿಐಎಲ್ ನೇಮಕಾತಿ 2021ರ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ
ಅಭ್ಯರ್ಥಿಗಳು ನಿಗದಿತ ಮೊತ್ತವ 750/-ರೂ (ಜನ್/ಯುಆರ್/ಒಬಿಸಿ/ಮಹಿಳೆಯರು) ಮತ್ತು 450/-ರೂ (SC/ST/PWD/EWS) ಅನ್ನು ಅರ್ಜಿ ಶುಲ್ಕವಾಗಿ ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕಿರುತ್ತದೆ.

ಬಿಇಸಿಐಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಬಿಇಸಿಐಎಲ್ ನೇಮಕಾತಿ 2021ರ ಸಲಹೆಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಗದಿತ ನಿಯಮಗಳು ಮತ್ತು ಅವಶ್ಯಕತೆಗಳ ಪ್ರಕಾರ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಬಿಇಸಿಐಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/vacancies ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BECIL recruitment 2021 notification has been released for 10 consultant posts. Interested candidates can apply before september 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+