BECIL Recruitment 2021: 120 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ 120 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಿಇಸಿಐಎಲ್ ನಲ್ಲಿ ಉದ್ಯೋಗಾವಕಾಶ..ಫೆ.22ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಎಸ್ಸಿ, ಪದವಿ, ಪಿಜಿ ಡಿಪ್ಲೋಮಾ, ಡಿಪ್ಲೋಮಾ, 12ನೇ ತರಗತಿ, 10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವ‍ರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 17,303/- ರಿಂದ 42,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 830/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ:

ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬಿಇಸಿಐಎಲ್ ನ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BECIL recruitment 2021 notification has been released for 120 various posts. Interested candidates can apply through online before February 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X