ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 7 ಕನ್ಸಲ್ಟೆಂಟ್ ಅಥವಾ ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ:
ಎಂಬಿಬಿಎಸ್, ಡಿಪ್ಲೋಮಾ/ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್ ಮತ್ತು ಸಿಎ/ಐಸಿಡಬ್ಲ್ಯೂಎ/ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಕನ್ಸಲ್ಟೆಂಟ್ ಅಥವಾ ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ/ಓಬಿಸಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 750/-ರೂ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











