BECIL Recruitment 2022 : 500 ತನಿಖಾಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 500 ತನಿಖಾಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಭಾರತೀಯ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 17,2022 ರಿಂದ ಜನವರಿ 25,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬಿಇಸಿಐಎಲ್ ನಲ್ಲಿ 500 ಹುದ್ದೆಗಳ ನೇಮಕಾತಿ

BECIL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ:

ತನಿಖಾಧಿಕಾರಿ - 350 ಹುದ್ದೆಗಳು
ಮೇಲ್ವಿಚಾರಕ - 150 ಹುದ್ದೆಗಳು
ಒಟ್ಟು 500 ಹುದ್ದೆಗಳು

BECIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ತನಿಖಾಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BECIL ನೇಮಕಾತಿ 2022 ವಯೋಮಿತಿ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ತನಿಖಾಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BECIL ನೇಮಕಾತಿ 2022 ವೇತನ ವಿವರ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ತನಿಖಾಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/- ರಿಂದ 30,000/-ರೂಗಳ ವರೆಗೆ ವೇತನ ನೀಡಲಾಗುವುದು.

BECIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ತನಿಖಾಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BECIL ನೇಮಕಾತಿ 2022 ಅರ್ಜಿ ಶುಲ್ಕ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ತನಿಖಾಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ/ಮಾಜಿ ಸೈನಿಕ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 350/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

BECIL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ ? :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ತನಿಖಾಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 25,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BECIL recruitment 2022 notification has been released for 500 investigator and supervisor posts. Interested candidates can apply before January 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X