ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇಂಜಿನಿಯರ್ಸ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
5 ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಹುದ್ದೆ, 01 ಕಂಪ್ಯೂಟರ್ ಸೈನ್ಸ್, 02 ಮೆಕ್ಯಾನಿಕಲ್ ಒಟ್ಟು 8 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 07-10-2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಯೋಮಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 32, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 37 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಬಿಇ, ಬಿಟೆಕ್, ಹಾಗೂ ಇಂಜಿನಿಯರಿಂಗ್ ನಲ್ಲಿ ಬಿಎಸ್ಸಿ ಪೂರ್ಣಗೊಳಿಸಿರಬೇಕು.
ಎಲೆಕ್ಟ್ರಾನಿಕ್ಸ್ ವಿಭಾಗಕ್ಕೆ ಬೇಕಾದ ವಿದ್ಯಾರ್ಹತೆ
- ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
- ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್
- ಕಮ್ಯುನಿಕೇಷನ್ ಇಂಜಿನಿಯರಿಂಗ್
- ಎಲೆಕ್ಟ್ರಾನಿಕ್ಸ್ ಅಂಡ್ ಟೆಲೆಕಮ್ಯುನಿಕೇಷನ್ ಇಂಜಿನಿಯರಿಂಗ್
- ಟೆಲಿಕಾಂ ಇಂಜಿನಿಯರಿಂಗ್
ಮೆಕ್ಯಾನಿಕಲ್ ವಿಭಾಗಕ್ಕೆ: ಮೆಕ್ಯಾನಿಕಲ್ ಇಂಜಿನಿಯರಿಂಗ್
ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ
- ಕಂಪ್ಯೂಟರ್ ಇಂಜಿನಿಯರಿಂಗ್
- ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್
ವೇತನ ಶ್ರೇಣಿ: ರೂ.20600-46500/- + ಇತರೆ ಭತ್ಯೆಗಳು
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಹಾಗೂ ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ಶುಲ್ಕದ ಚಲನ್ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಕಚೇರಿ ವಿಳಾಸಕ್ಕೆ ಕಳುಹಿಸತಕ್ಕದ್ದು.
ಲಗತ್ತಿಸಬೇಕಾದ ದಾಖಲೆಗಳು
- ಎಸ್ ಎಸ್ ಎಲ್ ಸಿ ಅಂಕಪಟ್ಟಿ ಪ್ರತಿ
- ಪದವಿ ಪ್ರಮಾಣ ಪತ್ರಗಳ ಪ್ರತಿ
- ಸೇವಾ ಅನುಭವದ ಪ್ರಮಾಣ ಪತ್ರದ ಪ್ರತಿ
- ಜಾತಿ ಪ್ರಮಾಣ ಪತ್ರದ ಪ್ರತಿ
- ಅರ್ಜಿ ಶುಲ್ಕ ಪಾವತಿಸಿದ ರಶೀದಿ
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.500/-
- ಎಸ್.ಸಿ/ಎಸ್.ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 07-10-2017
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











