ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಡೆಪ್ಯುಟಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 3,2019 ರೊಳಗೆ ಕಳುಹಿಸಬಹುದು.

| CRITERIA | DETAILS |
| Name Of The Posts | ಡೆಪ್ಯುಟಿ ಇಂಜಿನಿಯರ್ |
| Organisation | ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) |
| Educational Qualification | ಬಿ.ಇ / ಬಿ.ಟೆಕ್ /ಬಿ.ಎಸ್ಸಿ |
| Job Location | ಬೆಂಗಳೂರು (ಕರ್ನಾಟಕ) |
| Salary Scale | 40,000/- ರಿಂದ 1,40,000/-ರೂ |
| Application Start Date | March 20, 2019 |
| Application End Date | April 3, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿ.ಇ /ಬಿ.ಟೆಕ್ /ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಮಾರ್ಚ್1,2019 ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ:
ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅ ರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸುತ್ತಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಏಪ್ರಿಲ್3,2019 ರೊಳಗೆ ಸಲ್ಲಿಸಬೇಕು.
ಕಚೇರಿಯ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೇಜರ್,
ಮಿಲಿಟರ್ ಕಮ್ಯುನಿಕೇಶನ್ ಎಸ್‌ಬಿಯು,
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013
ಬಿಇಎಲ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











