BEL Recruitment 2019: 10 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳ ನೇಮಕಾತಿ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) 10 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಬಿಇಎಲ್‌ ನಲ್ಲಿ 10 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಡೆಪ್ಯುಟಿ ಇಂಜಿನಿಯರ್
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಬಿ.ಇ /ಬಿ.ಟೆಕ್, ಬಿ.ಆರ್ಕ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/- ರಿಂದ 1,40,000/-ರೂ
Application Start Date November 8, 2019
Application End Date November 30, 2019

ವಿದ್ಯಾರ್ಹತೆ:

ಬಿ.ಇ /ಬಿ.ಟೆಕ್ ಮತ್ತು ಬಿ.ಆರ್ಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲದಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 1,2019 ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಇಂಜಿನಿಯರ್ ಹುದ್ದೆಗಳಿಗೆ ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಸಾಮಾನ್ಯ ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)ನ ಅಧಿಕೃತ ವೆಬ್‌ಸೈಟ್‌ http://www.bel-india.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ನಂತರ ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ನವೆಂಬರ್ 30,2019ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಮ್ಯಾನೇಜರ್,
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌),
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

ಮತ್ತು ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) recruitment 2019 notification has been released on official website for the recruitment of 10 deputy engineer posts. Interested candidates can apply before 30th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X