BEL Recruitment 2019: 19 ಇಂಜಿನಿಯರ್ ಹುದ್ದೆಗಳ ನೇಮಕಾತಿ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) 19 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ನವೆಂಬರ್ 2,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಲ್‌ ನಲ್ಲಿ 19 ಇಂಜಿನಿಯರ್ ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಇಂಜಿನಿಯರ್
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಇಲೆಕ್ಟ್ರಾನಿಕ್ಸ್‌,ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಮತ್ತು ಮೆಕ್ಯಾನಿಕಲ್‌ನಲ್ಲಿ ಬಿ.ಇ / ಬಿ.ಟೆಕ್
Job Location ಬೆಂಗಳೂರು (ಕರ್ನಾಟಕ) ಮತ್ತು ಪಂಜಾಬ್
Salary Scale ತಿಂಗಳಿಗೆ 23,000/-ರೂ
Application Start Date October 23, 2019
Application End Date November 2, 2019

ವಿದ್ಯಾರ್ಹತೆ:

ಇಲೆಕ್ಟ್ರಾನಿಕ್ಸ್‌,ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಮತ್ತು ಮೆಕ್ಯಾನಿಕಲ್‌ನಲ್ಲಿ ಬಿ.ಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲದಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 1,2019ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)ನ ಅಧಿಕೃತ ವೆಬ್‌ಸೈಟ್‌ http://www.bel-india.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 2,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) recruitment notification has been released on official website for the recruitment of 19 engineer posts.Interested candidates can apply through online before 2nd november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X