ಬಿಇಎಲ್‌ ನೇಮಕಾತಿ 2019: 25 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನೇಮಕಾತಿ 25 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದಕ್ಕೆ ಓದಿ.

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಕಾಂಟ್ರಾಕ್ಟ್ ಇಂಜಿನಿಯರ್
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಬಿ.ಇ / ಬಿ.ಟೆಕ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 23,000/-ರೂ
Application Start Date June 3, 2019
Application End Date June 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮೇ 1,2019 ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತರು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)ನ ಅಧಿಕೃತ ವೆಬ್‌ಸೈಟ್‌ http://www.bel-india.in/ ಗೆ ಹೋಗಿ ನೇಮಕಾತಿಯ ಬಗೆಗಿನ ಅಧಿಸೂಚನೆಯನ್ನು ಓದತಕ್ಕದ್ದು.ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿಮಾಡುವ ಮೂಲಕ ಜೂನ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BEL Recruitment 2019-20: Apply Online for 25 Contract Engineers Vacancies. Bharat Electronics Limited (BEL) invited Online applications from eligible and interested candidates to fill up Contract Engineers Posts through BEL official notification 2019. Job seekers who are looking for a career in All India Government can make use of this opportunity. Apply online for these BEL Contract Engineers jobs before 19th June 2019. Official website of BEL is www.bel-india.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X