BEL Recruitment 2020: 125 ಅಧಿಕಾರಿ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಇಎಲ್ ನಲ್ಲಿ 125 ಹುದ್ದೆಗಳ ನೇಮಕಾತಿ..ನ.25ರೊಳಗೆ ಅರ್ಜಿ ಹಾಕಿ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 125 ಟ್ರೈನಿ ಇಂಜಿನಿಯರ್, ಟ್ರೈನಿ ಅಧಿಕಾರಿ, ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:

ಹುದ್ದೆಗಳ ವಿವರ:

ಟ್ರೈನಿ ಇಂಜಿನಿಯರ್ - 93 ಹುದ್ದೆಗಳು 

ಪ್ರಾಜೆಕ್ಟ್ ಇಂಜಿನಿಯರ್ - 29 ಹುದ್ದೆಗಳು
ಟ್ರೈನಿ ಅಧಿಕಾರಿ - 2 ಹುದ್ದೆಗಳು
ಪ್ರಾಜೆಕ್ಟ್ ಅಧಿಕಾರಿ - 1 ಹುದ್ದೆ
ಒಟ್ಟು 125 ಹುದ್ದೆಗಳು

ವಿದ್ಯಾರ್ಹತೆ:

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಬಿಎಸ್ಸಿ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ವಯೋಮಿತಿ:

ನವೆಂಬರ್ 1,2020ರ ಅನ್ವಯ ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 25 ವರ್ಷ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ವೇತನ:

ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ವೃತ್ತಿಯಲ್ಲಿ ಅನುಭವ ಹೊಂದಿರುವ ಆಧಾರದ ಮೇಲೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಟ್ರೈನಿ ಇಂಜಿನಿಯರ್ ಅಥವಾ ಟ್ರೈನಿ ಅಧಿಕಾರಿ ಹುದ್ದೆಗಳಿಗೆ 200/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಅಥವಾ ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 25,2020ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ತಲುಪಿಸಬೇಕಿರುತ್ತದೆ. ಅರ್ಜಿ ತಲುಪಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
PO Box 12026,
Cossipore post office,
kolkata 70002.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2020 notification has been released for 125 trainee and engineer posts. Interested candidates can apply through online before November 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+