BEL Recruitment 2020: 13 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ 13 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯುನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 6,2021ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ಬಿಇಎಲ್ ನಲ್ಲಿ ಉದ್ಯೋಗಾವಕಾಶ....ಜ.6ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಡಿಸೆಂಬರ್ 1,2020ರ ಅನ್ವಯ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ 200/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ, ಪರಿ‍ಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 6,2021ರೊಳಗ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2020 notification has been released for 13 trainee engineer and project engineer posts. Interested candidates can apply through online before January 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+