BEL Recruitment 2020: 137 ಪ್ರಾಜೆಕ್ಟ್ ಇಂಜಿನಿಯರ್, ಟ್ರೈನಿ ಇಂಜಿನಿಯರ್ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 137 ಟ್ರೈನಿ ಇಂಜಿನಿಯರ್, ಟ್ರೈನಿ ಅಧಿಕಾರಿ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬಿಇಎಲ್ ನೇಮಕಾತಿ....ಡಿ.26ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಟ್ರೈನಿ ಇಂಜಿನಿಯರ್ - 70 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್ - 61 ಹುದ್ದೆಗಳು
ಟ್ರೈನಿ ಅಧಿಕಾರಿ - 6 ಹುದ್ದೆಗಳು
ಒಟ್ಟು 137 ಹುದ್ದೆಗಳು

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಮತ್ತು ಬಿಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 30,2020ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟ್ರೈನಿ ಇಂಜಿನಿಯರ್ ಅಥವಾ ಟ್ರೈನಿ ಅಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಟ್ರೈನಿ ಇಂಜಿನಿಯರ್ ಅಥವಾ ಟ್ರೈನಿ ಅಧಿಕಾರಿ ಹುದ್ದೆಗಳಿಗೆ 200/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 26,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BEL recruitment 2020 notification has been released for 137 project engineer, trainee engineer and officer posts. Interested candidates can apply through online before December 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X