BEL Recruitment 2020: 25 ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) 25 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಜನವರಿ 22,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಲ್‌ ನೇಮಕಾತಿ..ಜ.22ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಟ್ರೈನಿ ಇಂಜಿನಿಯರ್
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಬಿ.ಇ /ಬಿ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date January 3, 2020
Application End Date January 22, 2020

ವಿದ್ಯಾರ್ಹತೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನೇಮಕಾತಿಯ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್‌/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 1,2019 ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)ನ ಅಧಿಕೃತ ವೆಬ್‌ಸೈಟ್‌ http://www.bel-india.in/ ಗೆ ಹೋಗಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆಯೇ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 22.2020ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಮ್ಯಾನೇಜರ್,
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) recruitment 2020 notification has been released on official website for the recruitment of 25 trainee engineer posts. Interested candidates can apply before 22nd January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+