ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 33 ಟ್ರೈನಿ ಇಂಜಿನಿಯರ್, ಟ್ರೈನಿ ಅಧಿಕಾರಿ, ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ಹುದ್ದೆಗಳ ವಿವರ:
ಟ್ರೈನಿ ಇಂಜಿನಿಯರ್ - 19 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್ - 11 ಹುದ್ದೆಗಳು
ಟ್ರೈನಿ ಅಧಿಕಾರಿ - 2 ಹುದ್ದೆಗಳು
ಪ್ರಾಜೆಕ್ಟ್ ಅಧಿಕಾರಿ - 1 ಹುದ್ದೆ
ಒಟ್ಟು 33 ಹುದ್ದೆಗಳು
ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್, ಬಿಎಸ್ಸಿ, ಎಂಬಿಎ ಮತ್ತು ಎಂಎಸ್ಡಬ್ಲ್ಯೂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 25 ಮತ್ತು 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ:
ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 50,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ವೃತ್ತಿಯಲ್ಲಿ ಅನುಭವ ಹೊಂದಿರುವ ಆಧಾರದ ಮೇಲೆ ಮತ್ತು ಸಂದರ್ಶನದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಟ್ರೈನಿ ಇಂಜಿನಿಯರ್ ಅಥವಾ ಟ್ರೈನಿ ಅಧಿಕಾರಿ ಹುದ್ದೆಗಳಿಗೆ 200/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಅಥವಾ ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 21,2020ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.