ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 112 ಟ್ರೇಡ್ (ಐಟಿಐ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಸೆಪ್ಟೆಂಬರ್ 30,2021ರ ಅನ್ವಯ ಗರಿಷ್ಟ 21 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7,987/- ರಿಂದ 8,985/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











