
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ 9 ಟ್ರೈನಿ ಇಂಜಿನಿಯರ್ -I ಮತ್ತು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜೂನ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್/ಬಿ.ಎಸ್ಸಿ, ಇಂಜಿನಿಯರಿಂಗ್/ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ 200/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ, ಪ.ಜಾ,ಪ.ಪಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
Manager (HR/SC &US),
Bharat Electronics Ltd,
Jalahalli,
Bangalore-560013.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











