ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 10 ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 6,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BEL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
BEL ನೇಮಕಾತಿ 2021 ವಯೋಮಿತಿ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1,2021ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
BEL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
BEL ನೇಮಕಾತಿ 2021 ವೇತನ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
BEL ನೇಮಕಾತಿ 2021 ಅರ್ಜಿ ಶುಲ್ಕ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
BEL ನೇಮಕಾತಿ 2021 ಅರ್ಜಿ ಸಲ್ಲಿಕೆ:
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 6,2022ರೊಳಗೆ ಕಚೇರಿಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ತಲುಪಿಸಬಹುದು.
ಕಚೇರಿ ವಿಳಾಸ:
Sr. Dy. General Manager (HR), Naval Systems SBU, Bharat Electronics Limited, Jalahalli Post, Bangalore - 560013, Karnataka.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











