ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 10 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಫೆಬ್ರವರಿ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ನೋಡಿ.
ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ, ಪ.ಜಾ/ಪ.ಪಂ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತರು ಅನ್ಲೈನ್ ನಲ್ಲಿ ಬಿಇಎಲ್ ನ ಅಧಿಕೃತ ವೆಬ್ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚೆನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.