BEL Recruitment 2021 : 12 ಸೀನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಇಎಲ್ ನಲ್ಲಿ ಉದ್ಯೋಗಾವಕಾಶ... ತಿಂಗಳಿಗೆ 60,000/-ರೂ ವೇತನ ಪಡೆಯುವ ಅವಕಾಶ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 12 ಸೀನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಡಿಸೆಂಬರ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ವಿದ್ಯಾರ್ಹತೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಸೀನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ವಯೋಮಿತಿ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ನವೆಂಬರ್ 1,2021ರ ಅನ್ವಯ ಸೀನಿಯರ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 32 ವರ್ಷ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 36 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು. ಪ. ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವೇತನ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಿ ತದನಂತರ ನೇರ ಸಂದರ್ಶನ/ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ (ಆನ್‌ಲೈನ್ ಅಥವಾ ಎಸ್‌ಬಿಐ ಬ್ರಾಂಚ್) ಮೂಲಕ ಪಾವತಿಸಬಹುದು. ಅಂಗವಿಕಲ, ಪ.ಜಾ ಮತ್ತು ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Manager (HR/SC&US/HLS&SCB),
Bharat Electronics Ltd,
Jalahalli post,
Bengaluru - 560013

ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 12 senior engineer and deputy manager Posts. Interested candidates can apply before December 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X