BEL Recruitment 2021 : 14 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಇಎಲ್ ನಲ್ಲಿ 14 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 10 ಟ್ರೈನಿ ಇಂಜಿನಿಯರ್ ಮತ್ತು 4 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :

ವಿದ್ಯಾರ್ಹತೆ :

ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ವಯೋಮಿತಿ :

ಆಗಸ್ಟ್ 1,2021ರ ಅನ್ವಯ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಗರಿಷ್ಟ ೨೮ ವರ್ಷ ಮತ್ತು ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ ಗರಿಷ್ಟ 2೫ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ .

ವೇತನ :
 

ವೇತನ :

ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರಿಂದ 31,000/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ವೃತ್ತಿಯಲ್ಲಿ ಅನುಭವ ಹೊಂದಿರುವ ಆಧಾರದ ಮೇಲೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಅರ್ಜಿ ಶುಲ್ಕ :

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 24 ರಿಂದ ಸೆಪ್ಟೆಂಬರ್ 8,2021ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 14 trainee and project engineer posts. Interested candidates can apply through online before September 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X