BEL recruitment 2021 : 15 ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 15 ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಇಲೆಕ್ಟ್ರಾನಿಕ್ಸ್/ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ಟೆಲಿ ಕಮ್ಯುನಿಕೇಶನ್/ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ/ಬಿ.ಟೆಕ್ ಅಥವಾ ಬಿಇ, ಬಿ.ಟೆಕ್ (ಮೆಕ್ಯಾನಿಕಲ್) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ಆಗಸ್ಟ್ 1,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು. ಪ. ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಿ ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ (ಆನ್‌ಲೈನ್ ಅಥವಾ ಎಸ್‌ಬಿಐ ಬ್ರಾಂಚ್) ಮೂಲಕ ಪಾವತಿಸಬಹುದು. ಅಂಗವಿಕಲ, ಪ.ಜಾ ಮತ್ತು ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 15,2021ರ ರಾತ್ರಿ 11 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 15 project engineer-I posts. Interested candidates can apply before September 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+