
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 268 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬಹುದು. ಅಂಗವಿಕಲ, ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











