BEL Recruitment 2021: 30 ಟ್ರೈನಿ ಇಂಜಿನಿಯರ್ -I ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ 30 ಟ್ರೈನಿ ಇಂಜಿನಿಯರ್ -I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ನೋಡಿ.

ಬಿಇಎಲ್ ನಲ್ಲಿ 30 ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಏಪ್ರಿಲ್ 1,2021ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟ್ರೈನಿ ಇಂಜಿನಿಯರ್ -I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ, ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 30 trainee engineer-I posts. Apply online before May 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X