BEL Recruitment 2021: 511 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಇಎಲ್ ನಲ್ಲಿ 511 ಇಂಜಿನಿಯರ್ ಹುದ್ದೆಗಳ ನೇಮಕಾತಿ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 511 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ :

ಹುದ್ದೆಗಳ ವಿವರ :

ಟ್ರೈನಿ ಇಂಜಿನಿಯರ್ -I - 203 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್ - I - 308 ಹುದ್ದೆಗಳು
ಒಟ್ಟು 511 ಹುದ್ದೆಗಳು

ವಿದ್ಯಾರ್ಹತೆ :

ವಿದ್ಯಾರ್ಹತೆ :

ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ವಯೋಮಿತಿ :

ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ 25 ವರ್ಷ ಮತ್ತು ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ :

ವೇತನ :

ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರಿಂದ 50,000/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ವೃತ್ತಿಯಲ್ಲಿ ಅನುಭವ ಹೊಂದಿರುವ ಆಧಾರದ ಮೇಲೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಅರ್ಜಿ ಶುಲ್ಕ :

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. 

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 15,2021ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 511 project engineer and trainee engineer posts. Interested candidates can apply before August 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+