BEL Recruitment 2021: 53 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 53 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬಿಇಎಲ್ ನೇಮಕಾತಿ....ಫೆ.17ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಪ್ರಾಜೆಕ್ಟ್ ಇಂಜಿನಿಯರ್ (I) - 18 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್ (I) ಆಪ್ಟಿಕ್ಸ್ - 2 ಹುದ್ದೆಗಳು
ಟ್ರೈನಿ ಇಂಜಿನಿಯರ್ (I)- 33 ಹುದ್ದೆಗಳು
ಒಟ್ಟು 53 ಹುದ್ದೆಗಳು

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್,ಬಿಎಸ್ಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಪ್ರಾಜೆಕ್ಟ್ ಇಂಜಿನಿಯರ್ (I) ಹುದ್ದೆಗಳಿಗೆ ಗರಿಷ್ಟ 28 ವರ್ಷ ಮತ್ತು ಟ್ರೈನಿ ಇಂಜಿನಿಯರ್ (I) ಹುದ್ದೆಗಳಿಗೆ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಪ್ರಾಜೆಕ್ಟ್ ಇಂಜಿನಿಯರ್ (I) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 50,000/-ರೂ ಮತ್ತು ಟ್ರೈನಿ ಇಂಜಿನಿಯರ್ (I) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ 500/-ರೂ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 53 project engineer and trainee engineer posts. Interested candidates can apply through online before February 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X