BEL Recruitment 2021 : 8 ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 8 ಟ್ರೈನಿ ಇಂಜಿನಿಯರ್ I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜನವರಿ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬಿಇಎಲ್ ನಲ್ಲಿ ಉದ್ಯೋಗಾವಕಾಶ

BEL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEL ನೇಮಕಾತಿ 2021 ವಯೋಮಿತಿ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BEL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEL ನೇಮಕಾತಿ 2021 ವೇತನ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BEL ನೇಮಕಾತಿ 2021 ಅರ್ಜಿ ಶುಲ್ಕ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ೨00/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

BEL ನೇಮಕಾತಿ 2021 ಅರ್ಜಿ ಸಲ್ಲಿಕೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಜನವರಿ 15,2022ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ತಲುಪಿಸಬಹುದು.

ಕಚೇರಿ ವಿಳಾಸ:

DGM (HR/MR,MS&ADSN), Bharat Electronics Limited, Jalahalli Post, Bangalore - 560013, Karnataka.

ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bharat electronics limited (BEL) recruitment 2021 notification has been released for 8 trainee engineer I posts. Interested candidates can apply before January 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+