BEL Recruitment 2021: 88 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬಿಇಎಲ್ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಒಟ್ಟು ಎಂಭತ್ತೆಂಟು (88) ಟ್ರೈನಿ ಎಂಜಿನಿಯರ್ ಮತ್ತು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 6,2021 ರಿಂದ ಪ್ರಾರಂಭವಾಗಿ ಅಕ್ಟೋಬರ್ 27, 2021 ರಂದು ಕೊನೆಗೊಳ್ಳಲಿದೆ.

ಬಿಇಎಲ್ ನೇಮಕಾತಿ 2021 ವಿದ್ಯಾರ್ಹತೆ:

ಬಿಇಎಲ್ ನೇಮಕಾತಿ 2021 ವಿದ್ಯಾರ್ಹತೆ:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಲೆಕ್ಟ್ರಾನಿಕ್ಸ್ - ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಟೆಲಿಕಮ್ಯುನಿಕೇಷನ್/ಕಮ್ಯುನಿಕೇಶನ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಬಿ.ಇ/ಬಿ.ಟೆಕ್ ಪದವಿ ಜೊತೆಗೆ ಹುದ್ದೆಗೆ ಸಂಬಂಧಪಟ್ಟಂತೆ ಕೈಗಾರಿಕಾ ವಲಯದಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

ಬಿಇಎಲ್ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಬಿಇಎಲ್ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಟ್ರೈನಿ ಇಂಜಿನಿಯರ್ -1 - 55 ಹುದ್ದೆಗಳು

ಪ್ರಾಜೆಕ್ಟ್ ಇಂಜಿನಿಯರ್-1 - 33 ಹುದ್ದೆಗಳು

ಒಟ್ಟು ೮೮ ಹುದ್ದೆಗಳು

ಬಿಇಎಲ್ ನೇಮಕಾತಿ 2021 ವಯೋಮಿತಿ :

ಬಿಇಎಲ್ ನೇಮಕಾತಿ 2021 ವಯೋಮಿತಿ :

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಅಕ್ಟೋಬರ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 (ಟ್ರೈನಿ ಇಂಜಿನಿಯರ್) ಮತ್ತು ಗರಿಷ್ಟ 28 ವರ್ಷ ( ಪ್ರಾಜೆಕ್ಟ್ ಇಂಜಿನಿಯರ್) ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬಿಇಎಲ್ ನೇಮಕಾತಿ 2021 ವೇತನ:

ಬಿಇಎಲ್ ನೇಮಕಾತಿ 2021 ವೇತನ:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತದನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಬಿಇಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಬಿಇಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

 

ಬಿಇಎಲ್ ನೇಮಕಾತಿ 2021 ಅರ್ಜಿ ಶುಲ್ಕ :

ಬಿಇಎಲ್ ನೇಮಕಾತಿ 2021 ಅರ್ಜಿ ಶುಲ್ಕ :

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ 200/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳೆ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಬಿಇಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಬಿಇಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 6,2021 ರಿಂದ ಅಕ್ಟೋಬರ್ 27,2021ರೊಳಗೆ ಅರ್ಜಿಯನ್ನು ಹಾಕಬಹುದು.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 88 project engineer and trainee engineer posts. Interested candidates can apply before October 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+