ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 33 ಡೆಪ್ಯುಟಿ ಮ್ಯಾನೇಜರ್ ಮತ್ತು ಸೀನಿಯರ್ ಇಂಜಿನಿಯರ್ (ಇIII) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.
BEL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸೀನಿಯರ್ ಇಂಜಿನಿಯರ್ (ಇIII) ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್, ಎಂಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು.
BEL ನೇಮಕಾತಿ 2022 ವಯೋಮಿತಿ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸೀನಿಯರ್ ಇಂಜಿನಿಯರ್ (ಇIII) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ 1,2022ರ ಅನ್ವಯ ಗರಿಷ್ಟ 32 ಮತ್ತು 36 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
BEL ನೇಮಕಾತಿ 2022 ವೇತನ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸೀನಿಯರ್ ಇಂಜಿನಿಯರ್ (ಇIII) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,80,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
BEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸೀನಿಯರ್ ಇಂಜಿನಿಯರ್ (ಇIII) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
BEL ನೇಮಕಾತಿ 2022 ಅರ್ಜಿ ಶುಲ್ಕ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸೀನಿಯರ್ ಇಂಜಿನಿಯರ್ (ಇIII) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
BEL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಮತ್ತು ಸೀನಿಯರ್ ಇಂಜಿನಿಯರ್ (ಇIII) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಂತರ ಕಚೇರಿಗೆ ಏಪ್ರಿಲ್ 18,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Manager (HR), Product Development & Innovation Centre (PDIC), Bharat Electronics Limited, Prof. U R Rao Road, Near Nagaland Circle, Jalahalli Post, Bengaluru - 560 013, India.
ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











