BEL Recruitment 2022 : 75 ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 75 ಟ್ರೈನಿ ಇಂಜಿನಿಯರ್ I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬಿಇಎಲ್ ನಲ್ಲಿ 75 ಹುದ್ದೆಗಳ ನೇಮಕಾತಿ

ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾದಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 1,2022 ರಿಂದ ಫೆಬ್ರವರಿ 9,2022ರೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಸಲ್ಲಿಕೆಯ ಪ್ರಿಂಟೌಟ್ ನೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BEL ನೇಮಕಾತಿ 2022 ವಿದ್ಯಾರ್ಹತೆ :

BEL ನೇಮಕಾತಿ 2022 ವಿದ್ಯಾರ್ಹತೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEL ನೇಮಕಾತಿ 2022 ವಯೋಮಿತಿ :

BEL ನೇಮಕಾತಿ 2022 ವಯೋಮಿತಿ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ 1,2022ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

BEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಫೆಬ್ರವರಿ 9,2022ರೊಳಗೆ ನೊಂದಣಿ ಮಾಡಿಕೊಳ್ಳಬಹುದು. ನೊಂದಣಿ ಮಾಡಿಕೊಂಡ ನಂತರ ಆನ್‌ಲೈನ್ ಅರ್ಜಿಯ ಪ್ರಿಂಟೌಟ್ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಫೆಬ್ರವರಿ 13,2022ರಂದು ಬೆಳಿಗ್ಗೆ 8:15 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

BEL ನೇಮಕಾತಿ 2022 ವೇತನ :

BEL ನೇಮಕಾತಿ 2022 ವೇತನ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BEL ನೇಮಕಾತಿ 2022 ಅರ್ಜಿ ಶುಲ್ಕ :

BEL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BEL ನೇಮಕಾತಿ 2022 ಅರ್ಜಿ ಸಲ್ಲಿಕೆ :

BEL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 1,2022 ರಿಂದ ಫೆಬ್ರವರಿ 9,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಂದರ್ಶನ ನಡೆಯುವ ಸ್ಥಳ:
BEL High School,
Next BEL Hospital,
Near to BEL Factory,
Jalahalli Post, Bengaluru - 560013

ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Bharat electronics limited (BEL) recruitment 2022 notification has been released for 75 trainee engineer I posts. Interested candidates can apply before February 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X