ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2018ರ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.
ಬೆಂಗಳೂರು ಸೇರಿದಂತೆ ದೇಶದ ವಿವಿಧ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಡೆಪ್ಯುಟಿ ಇಂಜಿನಿಯರ್‌ಗಳನ್ನು ನೇಮಕಾ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಬಿಇಎಲ್ ನೇಮಕಾತಿ
ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ ಮತ್ತು ಮಾರ್ಕೆಟಿಂಗ್ ವಿಭಾಗದ 27 ಇಂಜಿನಿಯರ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಫೆ.7 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಡೆಪ್ಯುಟಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)-18 ಹುದ್ದೆಗಳು
ಡೆಪ್ಯುಟಿ ಇಂಜಿನಿಯರ್ (ಮೆಕಾನಿಕಲ್)-03 ಹುದ್ದೆಗಳು
ಡೆಪ್ಯುಟಿ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್)-04 ಹುದ್ದೆಗಳು
ಡೆಪ್ಯುಟಿ ಇಂಜಿನಿಯರ್ (ಮಾರ್ಕೆಟಿಂಗ್)-02 ಹುದ್ದೆಗಳು
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದ ಮೇಲೆ ಬಿಇ ಅಥವಾ ಬಿಟೆಕ್ ಪದವಿ ಗಳಿಸಿರಬೇಕು ಮತ್ತು ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವವಿರಬೇಕು.
ವಯೋಮಿತಿ: ಗರಿಷ್ಟ 26 ವರ್ಷ(ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ)
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಸಂದರ್ಶನದ ವೇಳೆ ತಮ್ಮ ಮೂಲ ದಾಖಲೆಗಳನ್ನು ತರಲು ಸೂಚಿಸಲಾಗಿದೆ.
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
- ಎಸ್‌ಸಿ.ಎಸ್‌ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಕಚೇರಿ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸತಕ್ಕದ್ದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07 ಫೆಬ್ರವರಿ 2018
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications