ಬೆಳಗಾವಿ ನ್ಯಾಯಾಂಗ ಘಟಕದಲ್ಲಿ ಬೆರಳಚ್ಚುಗಾರರ ನೇಮಕಾತಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿದ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದಾಗಿದೆ.

ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 10 ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜನವರಿ 16ರೊಳಗೆ ಸಲ್ಲಿಸತಕ್ಕದ್ದು.

ಬೆರಳಚ್ಚುಗಾರರ ನೇಮಕಾತಿ

ಹುದ್ದೆಗಳ ವಿವರ

ಬೆರಳಚ್ಚುಗಾರರು: 10 ಹುದ್ದೆಗಳು
ವೇತನ ಶ್ರೇಣಿ: ರೂ.11600-21000 ಹಾಗೂ ಇತರ ಭತ್ಯೆಗಳೊಂದಿಗೆ

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಅರ್ಹತಾ ಪರೀಕ್ಷೆ

ಅಭ್ಯರ್ಥಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗು ಇಂಗ್ಲಿಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.

ಆಯ್ಕೆ ವಿಧಾನ

ಅಭ್ಯರ್ಥಿಯು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನುಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಯ್ಕೆ ಮಾಡಲಾಗುವುದು.

ವಯೋಮಿತಿ

16-01-2018 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು,

ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ

ಪರಿವೀಕ್ಷಣಾ ಅವಧಿ

ಆಯ್ಕೆಯಾದ ಅಭ್ಯಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು

ಅರ್ಜಿ ಸಲ್ಲಿಕೆ

ಅರ್ಜಿ ನಮೂನೆ ಬೆರಳಚ್ಚು/ಗಣಕೀಕೃತ ಪ್ರತಿಯಲ್ಲಿ ಅಭ್ಯರ್ಥಿಗಳು ತಮ್ಮ ಸ್ವಂತ ಕೈಬರಹದಿಂದ ಎಲ್ಲ ಅಂಕಣಗಳನ್ನು ಜಾಗರೂಕತೆಯಿಂದ ಭರ್ತಿಮಾಡಿ, ಎಲ್ಲ ದಾಖಲಾತಿ/ಪ್ರಮಾಣ ಪತ್ರಗಳನ್ನು ಅನುಕ್ರಮವಾಗಿ ಸ್ವಯಂ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಒಂದೇ ಅರ್ಜಿಯನ್ನು ಸಲ್ಲಿಸಬೇಕು

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಸಂಬಂಧಿಸಿದ ಹುದ್ದೆಯ ಲಕೋಟೆ ಮೇಲೆ ಕಡ್ಡಾಯವಾಗಿ ತಾವು ಸಲ್ಲಿಸಲಿಚ್ಚಿಸುವ ಹುದ್ದೆಯ ಹೆಸರನ್ನು ದಪ್ಪ ಅಕ್ಷರಗಳಲ್ಲಿ ತಪ್ಪದೆ ನಮೂದಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬೆಳಗಾವಿ ಜಿಲ್ಲೆ, ಬೆಳಗಾವಿ

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗದ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
  • ಪ.ಜಾ/ಪ.ಪಂ/ಪ್ರ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ನಿಗದಿತ ಶುಲ್ಕವನ್ನು ಯಾವುದೇ ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು. ಡಿ.ಡಿ ಯನ್ನು ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬೆಳಗಾವಿ ಜಿಲ್ಲೆ, ಬೆಳಗಾವಿ ಇವರ ಹೆಸರಿನಲ್ಲಿ ತೆಗೆಯಬೇಕು.

ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Recruitment Notification of Belagavi District Court for post of Typist. Interested candidates can apply before Jan 16, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+