ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 84 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 84 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 28,2019ರ ರಾತ್ರಿ 11:59 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಬೆಳಗಾವಿ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಜವಾನ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ, 7ನೇ ತರಗತಿ
Job Location ಬೆಳಗಾವಿ
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ, ಜವಾನ- 17,000/- ರಿಂದ 28,950/-ರೂ

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಹಿರಿಯ ಶ್ರೇಣಿಯ ಬೆರಳಚ್ಚು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಕಿರಿಯ ಶ್ರೇಣಿಯ ಬೆರಳಚ್ಚು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಳನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಹುದ್ದೆಗಳ ವರ್ಗೀಕರಣ:

ಶೀಘ್ರಲಿಪಿಗಾರ: 20ಹುದ್ದೆಗಳು

ಇತರೆಗ್ರಾಮೀಣಮಹಿಳಾ ಅಭ್ಯರ್ಥಿಅಂಗ ವಿಕಲರುಒಟ್ಟು
ಸಾಮಾನ್ಯ1321***7
ಪ್ರವರ್ಗ-2A 11***2
ಪ್ರವರ್ಗ-2B11 1*3
ಪ್ರವರ್ಗ-3A 1113
ಪ್ರವರ್ಗ- 3B1 1
ಪರಿಶಿಷ್ಟ ಜಾತಿ 1 1**2
ಪರಿಶಿಷ್ಟ ಪಂಗಡ 11 2
ಒಟ್ಟು375520

* ಅಂಗವಿಕಲ ಅಭ್ಯರ್ಥಿಗಳಲ್ಲಿ ಒಂದು ಹುದ್ದೆ ಚಲನವಲನ ವೈಕಲ್ಯ ಹೊಂದಿರುವವರಿಗೆ
** ಕುಷ್ಟರೋಗ ಮುಕ್ತರಾದವರಿಗೆ ಒಂದು ಹುದ್ದೆ
*** ದೃಷ್ಟಿಮಾಂದ್ಯತೆಯುಳ್ಳವರಿಗೆ

ಬೆರಳಚ್ಚುಗಾರ: 13 ಹುದ್ದೆಗಳು

ಇತರೆಗ್ರಾಮೀಣಮಹಿಳಾ ಅಭ್ಯರ್ಥಿಮಾಜಿ ಸೈನಿಕರುಅಂಗವಿಕಲರುಕನ್ನಡ ಮಾಧ್ಯಮಯೋಜನಾ ನಿರಾಶ್ರಿತಒಟ್ಟು
ಸಾಮಾನ್ಯ1121 117
ಪ್ರವರ್ಗ-2A1 1
ಪ್ರವರ್ಗ-2B1 1
ಪ್ರವರ್ಗ-3A 1 1
ಪ್ರವರ್ಗ-3B 1 1
ಪರಿಶಿಷ್ಟ ಜಾತಿ 1 1* 2
ಒಟ್ಟು333111113

* ದೃಷ್ಟಿಮಾಂದ್ಯತೆಯುಳ್ಳವರಿಗೆ

ಬೆರಳಚ್ಚು ನಕಲುಗಾರ- 15 ಹುದ್ದೆಗಳು

ಇತರೆ ಗ್ರಾಮೀಣ ಮಹಿಳಾ ಅಭ್ಯರ್ಥಿ ಮಾಜಿ ಸೈನಿಕರುಯೋಜನಾ ನಿರಾಶ್ರಿತ ಒಟ್ಟು
ಸಾಮಾನ್ಯ1231 7
ಪ್ರವರ್ಗ-1 1 1
ಪ್ರವರ್ಗ-2A 1 12
ಪ್ರವರ್ಗ-3A1 1
ಪ್ರವರ್ಗ-3B 1 1
ಪರಿಶಿಷ್ಟ ಜಾತಿ1 1 2
ಪರಿಶಿಷ್ಟ ಪಂಗಡ 1 1
ಒಟ್ಟು 3353115

ಜವಾನ: 36 ಹುದ್ದೆಗಳು

ಇತರೆಗ್ರಾಮೀಣ ಮಹಿಳಾ ಅಭ್ಯರ್ಥಿ ಮಾಜಿ ಸೈನಿಕರು ಅಂಗವಿಕಲರು ಕನ್ನಡ ಮಾಧ್ಯಮಯೋಜನಾ ನಿರಾಶ್ರಿತ ಒಟ್ಟು
ಸಾಮಾನ್ಯ35521** 118
ಪ್ರವರ್ಗ-1 1
1* 1
ಪ್ರವರ್ಗ-2A 3 1 4
ಪ್ರವರ್ಗ-2B
1* 1
ಪ್ರವರ್ಗ-3A 1 12
ಪ್ರವರ್ಗ-3B 1 1* 2
ಪರಿಶಿಷ್ಟ ಜಾತಿ 22 1 3
ಪರಿಶಿಷ್ಟ ಪಂಗಡ11 2
ಒಟ್ಟು4912243236

* ದೃಷ್ಟಿಮಾಂದ್ಯತೆಯುಳ್ಳವರಿಗೆ
** ಶ್ರವಣ ದೋಷತೆಯುಳ್ಳವರಿಗೆ

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ:

ಹುದ್ದೆಗಳ ಹೆಸರುವೇತನ
ಶೀಘ್ರಲಿಪಿಗಾರರೂ.27,650/- ರಿಂದ 52,650/-ರೂ
ಬೆರಳಚ್ಚುಗಾರರೂ21,400/-- ರಿಂದ 42,000/-ರೂ,
ಬೆರಳಚ್ಚು ನಕಲುಗಾರರೂ21,400/-- ರಿಂದ 42,000/ರೂ
ಜವಾನರೂ 17,000/- ರಿಂದ 28,950/-ರೂ

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ 28,2019ರಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ಗರಿಷ್ಠ 35 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಮತ್ತು ಎಸ್ ಸಿ/ಎಸ್ ಟಿ ಪ್ರವರ್ಗ-1ರ ಗರಿಷ್ಠ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

ಮಾಜಿ ಸೈನಿಕರಿಗೆ ಗರಿಷ್ಠ ವಯೋಮಿತಿಯಲ್ಲಿ ಅವರು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವರೋ ಆ ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆ.

ವಿಧವೆಯರು, ಜೀತಕಾರ್ಮಿಕರು ಮತ್ತು ಅಂಗವಿಕಲರು ಸಂಬಂಧಿಸಿದ ಪ್ರಾಧಿಕಾರಗಳು ನೀಡುವ ಪ್ರಮಾಣ ಪತ್ರ ಹೊಂದಿದ್ದಲ್ಲಿ ವಯೋಮಿತಿಯಲ್ಲಿ ಗರಿಷ್ಠ 10 ವರ್ಷಗಳ ಸಡಿಲಿಕೆ ನೀಡಲಾಗುವುದು.

ಅಭ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳ ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.

ಅಭ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಭ್ಯರ್ಥಿಯು ಎಷ್ಟು ವ‍ರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸೇವೆ ಸಲ್ಲಿಸಿದ್ದರೆ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

ಅಭ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಲ್ಲಿ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.

ಅಭ್ಯರ್ಥಿಗಳು ರಾಜ್ಯ ಸರ್ಕಾರದಿಂದ ಪುರಸ್ಕೃತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡ ಗ್ರಾಮ ಸಮೂಹ ಪರಿಶೀಲಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅಂತಹ ಗ್ರಾಮ ಸಮೂಹ ಪರಿಶೀಲಕರಾಗಿ ಸೇವೆ ಸಲ್ಲಿಸಿದ ವರ್ಷಗಳು.

ಆಯ್ಕೆಯ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.

ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 1:10 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ

ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕ:

ವಿವಿಧ ವರ್ಗೀಕರಣಶೀಘ್ರಲಿಪಿಗಾರರ ಹುದ್ದೆಗೆಬೆರಳಚ್ಚುಗಾರ ಹುದ್ದೆಗೆಬೆರಳಚ್ಚು ನಕಲುಗಾರ ಹುದ್ದೆಗೆಜವಾನ ಹುದ್ದೆಗೆ
ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆರೂ.250/- ಅರ್ಜಿ ಶುಲ್ಕ ಪಾವತಿಸಬೇಕು.ರೂ.200/- ಅರ್ಜಿ ಶುಲ್ಕ ಪಾವತಿಸಬೇಕು.ರೂ.200/- ಅರ್ಜಿ ಶುಲ್ಕ ಪಾವತಿಸಬೇಕು.ರೂ.100/- ಅರ್ಜಿ ಶುಲ್ಕ ಪಾವತಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆಶುಲ್ಕ ವಿನಾಯಿತಿ ಇರುತ್ತದೆಶುಲ್ಕ ವಿನಾಯಿತಿ ಇರುತ್ತದೆಶುಲ್ಕ ವಿನಾಯಿತಿ ಇರುತ್ತದೆಶುಲ್ಕ ವಿನಾಯಿತಿ ಇರುತ್ತದೆ

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ:

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/belagavi OR https://districts.ecourts.gov.in/belagavi-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District court of belagavi has invited application for the post of 84 stenos, typist, copy-typist and peon posts. Interested candidates can apply through online before 28th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X