ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 31 ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಮಾಹಿತಿ ಪಡೆಯಲು ಮುಂದೆ ಓದಿ.
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಸಿಪಾಯಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕನ್ನು ಮಾರ್ಚ್ 29,2021ರೊಳಗೆ ಎಸ್‌ಬಿಐ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/belagavihistory ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ
ಮಾರ್ಚ್ 25,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.