ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

ಬೆಳಗಾವಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜೂನ್ 3 .2019ರ ಸಂಜೆ 5:30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿಗಳನ್ನು ಆನ್‌ಲೈನ್ ಹೊರತುಪಡಿಸಿ ಇತರೆ ಮೂಲದಿಂದ ಸಲ್ಲಿಸಲು ಅವಕಾಶವಿರುವುದಿಲ್ಲ.

ಬೆಳಗಾವಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 14 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಳಗಾವಿ  ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಂಗನವಾಡಿ ಕಾರ್ಯಕರ್ತೆಯರು
Organisation ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
Educational Qualification ಎಸ್‌.ಎಸ್‌.ಎಲ್‌.ಸಿ
Job Location ಬೆಳಗಾವಿ ( ಕ ರ್ನಾಟಕ)
Application Start Date May 4, 2019
Application End Date June 3, 2019

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆ ಹಾಗೂ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆಯ ಆದ್ಯತೆ:

ಈ ಕೆಳಕಂಡಂತೆ ಆದ್ಯತೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆ ಹೊಂದಿದ್ದು ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯ.

ಆಸಿಡ್ ದಾಳಿಗೊಳಗಾದವರ ಆಯ್ಕೆ:

ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಎರಡನೇ ಆದ್ಯತೆ:

ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ.

ವಿಧವೆಯರಿಗೆ ಮೂರನೇ ಆದ್ಯತೆ:

ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯರಾದಲ್ಲಿ ಪರಿಗಣಿಸಲಾಗುವುದಿಲ್ಲ.

ವಿಧವೆಯರು ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.

ಅಂಗವಿಕಲ ಅಭ್ಯರ್ಥಿಗಳಿಗೆ 4ನೇ ಆದ್ಯತೆ:

ಅಂಗನವಾಡಿ ಕಾರ್ಯಕರ್ತೆಯು 3 ರಿಂದ6ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದ್ದು, ಚಟುವಟಿಕೆ ವೇಳೆಯಲ್ಲಿ ಮಕ್ಕಳನ್ನು ಹಿಡಿದೆತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕಾಗುತ್ತದೆ. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ನಿರ್ವಹಿಸಬೇಕಾಗುತ್ತದೆ. ಆದ ಕಾರಣ ಕಿವುಡರು, ಮೂಕರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು, ಕಾರ್ಯಕರ್ತೆ ಹುದ್ದೆಗೆ ಅರ್ಹರಿರುವುದಿಲ್ಲ. ಇತರೆ ದೈಹಿಕ ಅಂಗವಿಕಲ್ ಶೇ.60% ಮೀರದಂತೆ ಇರುವವರು ಮತ್ತು ಶಾಲಾಪೂರ್ವ ಶಿಕ್ಷಣ ನಡೆಸಲು ಸಮರ್ಥವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಈ ಕುರಿತು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.

ಅಂಗವಿಕಲರು ಪ್ರಸ್ತುತ ತಾವು ಎಲ್ಲಿ ವಾಸವಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು.

ಅಂಗವಿಕಲ ಅಭ್ಯರ್ಥಿಗಳ ಅಂಗವಿಕಲತೆ ಪ್ರಮಾಣದ ಬಗ್ಗೆ ಸಂಶಯ ಉಂಟಾದಲ್ಲಿ ಪುನರ್ ಪರಿಶೀಲಿಸುವ ಅಧಿಕಾರವನ್ನು ಆಯ್ಕೆ ಸಮಿತಿ ಹೊಂದಿರುತ್ತದೆ. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಂಗನವಾಡಿಯ ಅಧಿಕೃತ ವೆಬ್‌ಸೈಟ್‌ www.anganwadirecruit.kar.nic.in ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 3,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಮಾನದಂಡವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Belagavi District WCD recruitment notification has been released on website for the recruitment of Anganwadi Workers post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X