ಬಿಇಎಂಎಲ್: ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ

Posted By:

ಬಿಇಎಂಎಲ್ ನಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫೆ.20 ರಿಂದ ಆರ್‌ಟಿಇ ಅರ್ಜಿ ಸಲ್ಲಿಕೆ ಪ್ರಾರಂಭ

ಎಂಸಿಎ ಪದವೀಧರರನ್ನು ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ಹೈಕೋರ್ಟ್: 101 ಹುದ್ದೆಗಳ ನೇರ ನೇಮಕಾತಿ

ಬಿಇಎಂಎಲ್ ನೇಮಕಾತಿ

ಈ ಹುದ್ದೆಯು ಮೂರು ವರ್ಷಗಳ ಅವಧಿಯ ಗುತ್ತಿಗೆ ನೇಮಕಾತಿಯಾಗಿದ್ದು, ಅರ್ಜಿ ಸಲ್ಲಿಸಲು ಫೆ.17 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ

ಹುದ್ದೆ: ಜೂನಿಯರ್ ಎಕ್ಸಿಕ್ಯೂಟಿವ್

ವೇತನ:

ರೂ.21500/- ಮೊದಲ ವರ್ಷ
ರೂ.23500/- ಎರಡನೇ ವರ್ಷ
ರೂ.25500/- ಮೂರನೇ ವರ್ಷ

ವಯೋಮಿತಿ: ಗರಿಷ್ಠ 27 (ಮೀಸಲಾತಿ ಸಡಿಲಿಕೆ ಇರಲಿದೆ)

 

ಆಯ್ಕೆ ವಿಧಾನ

ಅರ್ಜಿಗಳ ಸಂಖ್ಯೆ ಅಧಾರಿಸಿ ಅಭ್ಯರ್ಥಿಗಳನ್ನು ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಸೂಚಿಸಲಾಗಿದೆ. ಆನ್-ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಪ್ರಿಂಟ್ ತೆಗೆದು, ಅಗತ್ಯ ದಾಖಲೆಗಳು ಮತ್ತು ಇತ್ತೀಚಿನ ಭಾವಚಿತ್ರ ಲಗತ್ತಿಸಿ ಕಛೇರಿ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ಕಛೇರಿ ವಿಳಾಸಕ್ಕೆ ತಲುಪಿಸತಕ್ಕದ್ದು.

ಪ್ರಮುಖ ದಿನಾಂಕಗಳು

  • ಆನ್-ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-02-2018
  • ಅರ್ಜಿಯನ್ನು ಪೋಸ್ಟಲ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ: 24-02-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

English summary
BEML looking for MCA professionals to be engaged on fixed tenure contract basis for its various Manufacturing/ Marketing Divisions located all over India.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia