BEML Recruitment 2020: ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಮ್ಯಾನೇಜ್ಮೆಂಟ್ ಟ್ರೈನಿ- ಕಂಪೆನಿ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಿಇಎಂಎಲ್ ನಲ್ಲಿ  ಉದ್ಯೋಗಾವಕಾಶ..ಡಿ.4ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 4,2020ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಮ್ಯಾನೇಜ್ಮೆಂಟ್ ಟ್ರೈನಿ-ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಡಿಸೆಂಬರ್ 4,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BEML recruitment 2020 notification has been released for recruitment of management trainee- company secretary posts. Interested candidates can apply before December 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X