BEML: ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ನಲ್ಲಿ ವ್ಯವಸ್ಥಾಪಕ, ಡೆಪ್ಯುಟಿ ಜನರಲ್ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಂಎಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ವ್ಯವಸ್ಥಾಪಕ, ಡೆಪ್ಯುಟಿ ಜನರಲ್ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ
Organisation ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್)
Educational Qualification ಇಂಜಿನಿಯರಿಂಗ್ ಪದವಿ, ಪದವಿ, ಡಿಪ್ಲೋಮಾ, ಎಂಬಿಎ, ಸ್ನಾತಕೋತ್ತರ ಪದವಿ, ಎಲ್‌ಎಲ್‌ಎಂ ಮತ್ತು ಎಲ್ಎಲ್‌ಬಿ
Job Location ದೆಹಲಿ,ಬೆಂಗಳೂರು
Salary Scale ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ -ತಿಂಗಳಿಗೆ 90,000/- ರಿಂದ 2,60,000/-ರೂ ಮತ್ತು ಹಿರಿಯ ವ್ಯವಸ್ಥಾಪಕ/ವ್ಯವಸ್ಥಾಪಕ - ತಿಂಗಳಿಗೆ 50,000/-ರಿಂದ 2,00,000/-ರೂ
Application Start Date March 17, 2020
Application End Date March 31, 2020

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ, ಪದವಿ, ಡಿಪ್ಲೋಮಾ, ಎಂಬಿಎ, ಸ್ನಾತಕೋತ್ತರ ಪದವಿ, ಎಲ್‌ಎಲ್‌ಎಂ ಮತ್ತು ಎಲ್ಎಲ್‌ಬಿ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 90,000/- ರಿಂದ 2,60,000/-ರೂ ಮತ್ತು ಹಿರಿಯ ವ್ಯವಸ್ಥಾಪಕ/ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರಿಂದ 2,00,000/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ 48 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬಿಇಎಂಎಲ್ ನ ಅಧಿಕೃತ ವೆಬ್‌ಸೈಟ್ https://www.bemlindia.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಏಪ್ರಿಲ್ 7,2020 ರೊಳಗೆ ತಲುಪಿಸಬೇಕಿರುತ್ತದೆ. ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:
ಹಿರಿಯ ವ್ಯವಸ್ಥಾಪಕರು,
ಬಿಇಎಂಎಲ್ ಲಿಮಿಟೆಡ್,
ನೇಮಕಾತಿ ವಿಭಾಗ,
ಬಿಇಎಂಎಲ್ ಸೌಧ,
ನಂ.23/1, 4ನೇ ಮುಖ್ಯ ರಸ್ತೆ,
ಎಸ್‌.ಆರ್ ನಗರ,
ಬೆಂಗಳೂರು-560027.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
beml recruitment 2020 notification has been released on official website for the recruitment of manager, dgm and assistant manager posts. Interested candidates can apply through online before 31st March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X