
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್ ಲಿಮಿಟೆಡ್) 3 ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸಪೋರ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 1,2021ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಜೂನ್ 1,2021ರ ಅನ್ವಯ ಇಂಟರ್ ಸಿಎ/ಇಂಟರ್ ಸಿಎಂಎ, ಪದವಿ ಜೊತೆಗೆ ಎಂಬಿಎ ಮತ್ತು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸಪೋರ್ಟ್ ಇಂಜಿನಿಯರ್ ಹುದ್ದೆಗಳಿಗೆ ಜೂನ್ 1,2021ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ
ಪ.ಜಾ/ಪ.ಪಂ/ಓಬಿಸಿ/ಅಂಗವಿಲ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,000/- ರಿಂದ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಬಿಇಎಂಎಲ್ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸಪೋರ್ಟ್ ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬಿಇಎಂಎಲ್ ಅಧಿಕೃತ ವೆಬ್‌ಸೈಟ್ http://www.bemlindia.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು [email protected] ವಿಳಾಸಕ್ಕೆ ಸ್ಕ್ಯಾನ್ಡ್ ಕಾಪಿ ಮತ್ತು ಅರ್ಜಿ ಸಂಖ್ಯೆಯನ್ನು ಕಳುಹಿಸುವ ಮೂಲಕ ಅರ್ಜಿಯನ್ನು ಖಾತ್ರಿಪಡಿಸಿಕೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











