Bengaluru City Civil Court Recruitment 2022 : 133 ಶೀಘ್ರಲಿಪಿಗಾರ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 133 ಶೀಘ್ರಲಿಪಿಗಾರ, ಆದೇಶ ಜಾರಿಕಾರ, ಬೆರಳಚ್ಚುಗಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬೆಂಗಳೂರು ನಗರ ಸಿವಿಲ್ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಮೇ.20ರೊಳಗೆ ಅರ್ಜಿ ಹಾಕಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 21,2022 ರಿಂದ ಮೇ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಹುದ್ದೆಗಳ ವಿವರ :

ಹುದ್ದೆಗಳ ವಿವರ :

ಶೀಘ್ರಲಿಪಿಗಾರ - 17 ಹುದ್ದೆಗಳು
ಬೆರಳಚ್ಚುಗಾರರು - 24 ಹುದ್ದೆಗಳು
ಆದೇಶ ಜಾರಿಕಾರ - 5 ಹುದ್ದೆಗಳು
ಜವಾನ - 87 ಹುದ್ದೆಗಳು
ಒಟ್ಟು 133 ಹುದ್ದೆಗಳು

ವಿದ್ಯಾರ್ಹತೆ :

ವಿದ್ಯಾರ್ಹತೆ :

ಶೀಘ್ರಲಿಪಿಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆದೇಶ ಜಾರಿಕಾರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಜವಾನ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಹುದ್ದೆಗಳ ಹೆಸರು - ವೇತನ (ತಿಂಗಳಿಗೆ)
ಶೀಘ್ರಲಿಪಿಗಾರ ರೂ.27,650/- ರಿಂದ 52,650/-ರೂ
ಬೆರಳಚ್ಚುಗಾರ ರೂ.21,400/- ರಿಂದ 42,000/-ರೂ
ಆದೇಶ ಜಾರಿಕಾರ ರೂ.19950/- ರಿಂದ 37900/-ರೂ
ಜವಾನ ರೂ.17000/- ರಿಂದ 28950/-ರೂ

ವಯೋಮಿತಿ :

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇ 20,2022ರ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲ/ವಿಧವೆಯರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆಯ ವಿಧಾನ :

ಆಯ್ಕೆಯ ವಿಧಾನ :

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.

ಆದೇಶ ಜಾರಿಕಾರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 1:25 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗಧಿಪಡಿಸಲಾಗಿದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಸಂದರ್ಶನಕ್ಕೆ ಕರೆಯಲು ಮಾತ್ರ ಪರಿಗಣಿಸಲಾಗುವುದು.

ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 1:10 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗಧಿಪಡಿಸಲಾಗಿದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಡೆದ ಅಂಕಗಳನ್ನು ಸಂದರ್ಶನಕ್ಕೆ ಕರೆಯಲು ಮಾತ್ರ ಪರಿಗಣಿಸಲಾಗುವುದು.

ನಿಗದಿತ ಅರ್ಜಿ ಶುಲ್ಕ :

ನಿಗದಿತ ಅರ್ಜಿ ಶುಲ್ಕ :

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/ccc-online-recruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಮೇ 21,2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಅಧಿಕೃತ ವೆಬ್‌ಸೈಟ್ https://districts.ecourts.gov.in/ccc-online-recruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 21,2020 ರಿಂದ ಮೇ 20,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bengaluru city civil court recruitment 2022 notification has been released for 133 stenographer, process server, peon and typist posts. Interested candidates can apply before May 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+