ಬೆಂಗಳೂರು ಮೆಟ್ರೋದಲ್ಲಿ 48 ಇಂಜಿನಿಯರ್ ಗಳ ನೇಮಕಾತಿ

Posted By:

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 48 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

15 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ 33 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥೀಗಳು ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ನಮ್ಮ ಮೆಟ್ರೋದಲ್ಲಿ ಇಂಜಿನಿಯರ್ ಗಳ ನೇಮಕಾತಿ

ಈ ಹುದ್ದೆಗಳು ಮೂರು ವರ್ಷದವರೆಗೂ ಗುತ್ತಿಗೆ ಆಧಾರಿತವಾಗಿದ್ದು, ಅಭ್ಯರ್ಥಿಗಳು ಒಮ್ಮೆ ನೇಮಕವಾದ ನಂತರ ಮೂರು ವರ್ಷ ಪೂರ್ಣಗೊಳಿಸಬೇಕು. ಗುತ್ತಿಗೆ ಅವಧಿ ಪೂರ್ಣಗೊಳ್ಳುವ ಮೊದಲೇ ಕೆಲಸ ಬಿಡಬೇಕಾದರೆ ಮೂರು ತಿಂಗಳು ಮುಂಚಿತವಾಗಿ ಅಧಿಕಾರಿಗಳ ಗಮನಕ್ಕೆ ತರತಕ್ಕದ್ದು.

ಹುದ್ದೆಗಳ ವಿವರ

ಹುದ್ದೆ ಹೆಸರುವೇತನವಯೋಮಿತಿ
ಅಡಿಷನಲ್ ಚೀಫ್ ಇಂಜಿನಿಯರ್ ರೂ.130610/-  55 ವರ್ಷ
ಡೆಪ್ಯುಟಿ ಚೀಫ್ ಇಂಜಿನಿಯರ್ ರೂ.122630/-  55 ವರ್ಷ
ಎಕ್ಸಿಕ್ಯುಟಿವ್ ಇಂಜಿನಿಯರ್ ರೂ.67430/-  50 ವರ್ಷ
ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ರೂ.55860/-  40 ವರ್ಷ
ಅಸಿಸ್ಟೆಂಟ್ ಇಂಜಿನಿಯರ್ ರೂ.48280/-  35 ವರ್ಷ

ವಿದ್ಯಾರ್ಹತೆ

ಸಂಬಂಧಪಟ್ಟ ಕ್ಷೇತ್ರದಲ್ಲಿ ಬಿಇ, ಬಿಟೆಕ್ ಅಥವಾ ಡಿಪ್ಲಮೋ ಪೂರ್ಣಗೊಳಿಸಿರಬೇಕು. ಜೊತೆಗೆ ಆ ಕ್ಷೇತ್ರದಲ್ಲಿ ಹೆಚ್ಚಿನ ಸೇವಾನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆ

  • ಆಸಕ್ತ ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಅರ್ಜಿಗಳನ್ನು ತುಂಬಿ ಅದನ್ನು ಪ್ರಿಂಟ್ ತೆಗೆದು, ಸೂಕ್ತ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಕಚೇರಿ ವಿಳಾಸಕ್ಕೆ ಕಳುಹಿಸುವುದು.
  • ಅರ್ಜಿಯ ಲಕೋಟೆ ಮೇಲೆ ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿರುವುದು ಎಂದು ಸ್ಪಷ್ಟವಾಗಿ ನಮೂದಿಸಬೇಕು

ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 31, 2017

ಅರ್ಜಿ ಸಲ್ಲಿಸುವ ವಿಳಾಸ

General Manager (HR),
Bangalore Metro Rail Corporation Limited,
III Floor, BMTC Complex,
K.H.Road, Shanthinagar,
Bangalore 560027

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Bangalore metro Rail Corporation released new notification on their official website for the recruitment of total 48 (Forty Eight) jobs. Job seekers should apply before 31st July 2017.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia