Bengaluru Smart City Recruitment 2020: ಚೀಫ್ ಡೇಟಾ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಚೀಫ್ ಡೇಟಾ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಸೆಪ್ಟೆಂಬರ್ 5,2020ರೊಳಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಭಾರತ ಸರ್ಕಾರವು ಬೆಂಗಳೂರನ್ನು ಸ್ಮಾರ್ಟ್ ಸಿಟಿ ಅಭಿಯಾನಕ್ಕೆ ಆಯ್ಕೆ ಮಾಡಿದೆ. ಇದರ ಉದ್ದೇಶವು ನಾಗರಿಕರ ಜೀವನ ಗುಣಮಟ್ಟವನ್ನು ಸುಧಾರಣೆಪಡಿಸುವುದಾಗಿದ್ದು, ಜನಸಮುದಾಯಕ್ಕೆ ಮೂಲಭೂತ ಸೌಲಭ್ಯವನ್ನು ಒದಗಿಸುವುದಾಗಿದೆ. ಸ್ವಚ್ಛ ಮತ್ತು ಸುಸ್ಥಿರ ಪರಿಸರವನ್ನು ಮತ್ತು ಸ್ಮಾರ್ಟ್ ಸಲ್ಯೂಷನ್ ಅಳವಡಿಸುವುದಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನ ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅನ್ನು ಸಂವಿಧಾನಾತ್ಮಕವಾಗಿ ಕಂಪನಿ ಅಧಿನಿಯಮದಡಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಬೆಂ.ಸ್ಮಾ.ಸಿ.ಲಿ ಕಂಪೆನಿಯು ನೇಮಕಾತಿ ನಡೆಸುತ್ತಿದೆ.

ವಿದ್ಯಾರ್ಹತೆ:

ಅಭ್ಯರ್ಥಿಯು ಡಾಟಾ ಸೈನ್ಸ್/ಕಂಪ್ಯೂಟರ್ ಸೈನ್ಸ್, ಮಾಹಿತಿ ವಿಜ್ಞಾನ ವಿಷಯಗಳಲ್ಲಿ ಇಂಜಿನಿಯರಿಂಗ್ ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ತಿಳಿಸಿರುವ ಕೋರ್ಸ್ ಗಳಲ್ಲಿ ಪರಿಣಿತಿ ಹೊಂದಿರಬೇಕು ಅಥವಾ ಗಣಿತ, ಅರ್ಥಶಾಸ್ತಗಳಲ್ಲಿ ಸ್ನಾತಕೋತ್ತರ ಪದವಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಅಥವಾ ಸಮಾನವಾದ ಕೆಲಸದ ಅನುಭವ ಪಡೆದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಗರಿಷ್ಟ 60 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಸ್ಟಾಂಡರ್ಡ್ ಸಿವಿ ಫಾರ್ಮಾಟ್ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಸೆಪ್ಟೆಂಬರ್ 5,2020ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕೃತ ವೆಬ್‌ಸೈಟ್: http://bbmp.gov.in/smart-city
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9902343002

ಅಭ್ಯರ್ಥಿಗಳು ನೇಮಕಾತಿಯ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
Bengaluru smart city limited invited application for chief data officer post. Interested candidate can apply before september 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X