ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 400 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಆಗಸ್ಟ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಅಪ್ರೆಂಟಿಸ್
Organisation ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
Educational Qualification ಇಂಜಿನಿಯರಿಂಗ್‌ನಲ್ಲಿ ಪದವಿ, ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
Job Location ಬೆಂಗಳೂರು (ಕರ್ನಾಟಕ)
Salary Scale ಇಂಜಿನಿಯರಿಂಗ್ ಪದವಿ ಅಭ್ಯರ್ಥಿಗಳಿಗೆ- 7000/-ರೂ ಸ್ಟೈಫೆಂಡ್ ಮತ್ತು ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮ ಅಭ್ಯರ್ಥಿಗಳಿಗೆ -5000/-ರೂ
Application Start Date August 9, 2019
Application End Date August 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂಜಿನಿಯರಿಂಗ್‌ನಲ್ಲಿ ಪದವಿ ಹಾಗೂ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಇಂಜಿನಿಯರಿಂಗ್ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ 7000/-ರೂ ಸ್ಟೈಫೆಂಡ್ ಮತ್ತು ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮ ಹೊಂದಿರುವ ಅಭ್ಯರ್ಥಿಗಳಿಗೆ 5000/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಂತೆ ಎಲ್ಲಾ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 31,2019ರ ಸಂಜೆ 4 ಗಂಟೆಯೊಳಗೆ ನೇರವಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ಉಪ ಪ್ರಧಾನ ವ್ಯವಸ್ಥಾಪಕರು,
ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ,
ಬೆ.ವಿ.ಕಂ ಕ್ರೆಸೆಂಟ್ ಟವರ್ಸ್,ಕ್ರೆಸೆಂಟ್ ರೋಡ್,
ಮಲ್ಲಿಗೆ ನರ್ಸಿಂಗ್ ಹೋಂ ಹತ್ತಿರ,
ರೇಸ್ಕೋರ್ಸ್,ಬೆಂಗಳೂರು-560001

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ https://bescom.org/kn/ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿ

More News  

For Quick Alerts
ALLOW NOTIFICATIONS  
For Daily Alerts

English summary
BESCOM 2019 recruitment notification has been released on official website for the recruitment of 400 apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+