ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ

Posted By:

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ 32 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಂಬೈ ರಿಫೈನರಿಯಲ್ಲಿ ಟೆಕ್ನಿಷಿಯನ್ ಮತ್ತು ಯುಟಿಲಿಟಿ ಆಪರೇಟರ್ ಹುದ್ದೆಗಳ ಅವಶ್ಯವಿದ್ದು, ಅರ್ಹ ಅಭ್ಯರ್ಥಿಗಳು ಜೂನ್ 26 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ಪ್ರೊಸಸ್ ಟೆಕ್ನಿಷಿಯನ್ ಗ್ರೇಡ್-7- 24 ಹುದ್ದೆಗಳು
ಯುಟಿಲಿಟಿ ಆಪರೇಟರ್ ಗ್ರೇಡ್-7-04 ಹುದ್ದೆಗಳು
ಯುಟಿಲಿಟಿ ಆಪರೇಟರ್ ಗ್ರೇಡ್-7 (ಬಾಯ್ಲರ್)-04 ಹುದ್ದೆಗಳು

ವೇತನ ಶ್ರೇಣಿ: ರೂ.13800-41000/-

ಬಿಪಿಸಿಎಲ್ ನೇಮಕಾತಿ

ವಯೋಮಿತಿ

  • ದಿನಾಂಕ 01-06-2017 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ಮತ್ತು ಗರಿಷ್ಠ 30 ವರ್ಷಗಳು
  • ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರಲಿದೆ)

ವಿದ್ಯಾರ್ಹತೆ

ಪ್ರೊಸೆಸ್ ಟೆಕ್ನಿಷಿಯನ್ ಹುದ್ದೆಗೆ: ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಡಿಪ್ಲೊಮಾ ಇನ್ ಕೆಮಿಕಲ್ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಐದು ವರ್ಷಗಳ ಸೇವಾ ಅನುಭವ ಇರಬೇಕು.

ಯುಟಿಲಿಟಿ ಆಪರೇಟರ್ ಹುದ್ದೆಗೆ: ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಡಿಪ್ಲೊಮಾ ಇನ್ ಮೆಕಾನಿಕಲ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. ಕನಿಷ್ಠ ಐದು ವರ್ಷಗಳ ಸೇವಾ ಅನುಭವವಿರಬೇಕು.

(ಬಾಯ್ಲರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೆಟ್ ಕಡ್ಡಾಯವಾಗಿ ಹೊಂದಿರಬೇಕು)

ಅಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ

ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಬೇರಾವುದೇ ರೀತಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಅರ್ಜಿ ಸಲ್ಲಿಸಲು www.bharatpetroleum.com>Careers ಲಿಂಕ್ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-06-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-06-2017

ಹೆಚ್ಚಿನ ಮಾಹಿತಿಗೆ www.bharatpetroleum.com ಗಮನಿಸಿ

English summary
Bharat petroleum corporation limited invites applications from young, energetic and bright Indian male candidates to work in Mumbai Refinery.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia