ಬಿಹೆಚ್ಇಲ್: 250 ಡಿಪ್ಲೊಮಾ ಪದವೀಧರರಿಗೆ ಅಪ್ರೆಂಟಿಸ್

ಬೆಂಗಳೂರಿನ ಬಿಹೆಚ್ಇಲ್ ನಲ್ಲಿ 250 ಡಿಪ್ಲೊಮಾ ಪದವೀಧರರಿಗೆ ಒಂದು ವರ್ಷದ ಅಪ್ರೆಂಟಿಸ್ ಗೆ ಮಹಾರತ್ನ ಕಂಪನಿ ಅರ್ಜಿ ಆಹ್ವಾನಿಸಿದೆ.

ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ವಿವಿಧ ತಾಂತ್ರಿಕ ವೃತ್ತಿಪರರ ನೇಮಕಾತಿ

2015 ರ ನಂತರ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಹರಾಗಿದ್ದು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಡಿಪ್ಲೊಮಾ ಪದವೀಧರರಿಗೆ ಅಪ್ರೆಂಟಿಸ್

 

ಅಪ್ರೆಂಟಿಸ್ ವಿಭಾಗ

ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಪದವಿ ಪಡೆದವರಿಗೆ ಒಂದು ವರ್ಷ ಅವಧಿಯ ಅಪ್ರೆಂಟಿಸ್ ಗೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಹತೆ

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ಕ್ಷೇತ್ರದಲ್ಲಿ ಡಿಪ್ಲೊಮಾ ಗಳಿಸಿರಬೇಕು. 2015 ರ ನಂತರ ಪದವಿ ಗಳಿಸಿದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.

ವಯೋಮಿತಿ

  • ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 27
  • ಒಬಿಸಿ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 30
  • ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 32

ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷಗಳ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ

ವಾಕ್-ಇನ್-ಇಂಟರ್ವ್ಯೂವ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು ತರತಕ್ಕದ್ದು.

ಸಂದರ್ಶನಕ್ಕೆ ಬೇಕಾದ ದಾಖಲೆಗಳು

ಅಭ್ಯರ್ಥಿಗಳು ಈ ಕೆಳಕಂಡ ಮೂಲ ದಾಖಲೆಗಳೊಂದಿಗೆ ಸ್ವಯಂ ದೃಡೀಕೃತ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ಕೊಂಡೊಯ್ಯಲು ತಿಳಿಸಲಾಗಿದೆ.

  • ಪದವಿ ಪ್ರಮಾಣ ಪತ್ರ
  • ಎಲ್ಲಾ ಸೆಮಿಸ್ಟರ್ ಗಳ ಅಂಕಪಟ್ಟಿ
  • ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಸ್ಟೈಪಂಡ್ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.4000/- ಸ್ಟೈಪಂಡ್ ನೀಡಲಾಗುವುದು.

ಸಂದರ್ಶನದ ದಿನಾಂಕ 20-11-2017 ರಿಂದ 16-12-2017 (ಬೆಳಗ್ಗೆ 9 ರಿಂದ ಮಧ್ಯಾಹ್ನ 3:30 ರವರೆಗೆ)

ಸಂದರ್ಶನದ ಸ್ಥಳ

ಬಿಹೆಚ್ಇಲ್ ವಿಭಾಗ ಮೈಸೂರು ರಸ್ತೆ, ಬೆಂಗಳೂರು-560026

ಹೆಚ್ಚಿನ ಮಾಹಿತಿಗಾಗಿ www.bheledn.com ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
BHEL looking for the engagement of Technician Apprentices (Diploma Holders) for ONE Year in BHEL, EDN, Bengaluru through WALK–IN-INTERVIEW
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X